ತೆರೆ ಮೇಲೆ ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

128

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೀವನ ಆಧರಿತ ಚಿತ್ರ ನಿರ್ಮಾಣವಾಗುತ್ತಿದೆ. ಇದರ ಮೊದಲ ಪೋಸ್ಟರ್ ರಾಮ ನವಮಿ ಹಿನ್ನೆಲೆಯಲ್ಲಿ ಇಂದು ಬಿಡುಗಡೆ ಮಾಡಲಾಗಿದೆ. ‘ಲೀಡರ್ ರಾಮಯ್ಯ’ ಎಂದು ಟೈಟಲ್ ಇಡಲಾಗಿದೆ.

ಸತ್ಯರತ್ನಮ್ ಅವರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ತಮಿಳು ಸ್ಟಾರ್ ನಟ ವಿಜಯ್ ಸೇತುಪತಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಆಗಸ್ಟ್ ನಲ್ಲಿ ಸಿನಿಮಾ ತೆರಿಗೆ ಬರಲಿದೆಯಂತೆ.




Leave a Reply

Your email address will not be published. Required fields are marked *

error: Content is protected !!