ಕಾನೂನು ಸೇವಾ ಪ್ರಾಧಿಕಾರ ಸದಾ ನಿಮ್ಮ ಬೆಂಬಲಕ್ಕೆ: ಸಿವಿಲ್ ನ್ಯಾ.ರಮೇಶ ಗಾಣಗೇರ

236

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕಾಡಳಿತ ಸಹಯೋಗದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ರಮೇಶ ಗಾಣಗೇರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳಲ್ಲಿ ಬಾಕಿ ಉಳಿದಿರುವ ಕೆಲಸಗಳು, ಸರ್ಕಾರದ ಯೋಜನೆಗಳು ಸೇರಿದಂತೆ ಪ್ರತಿಯೊಂದು ಇಲಾಖೆಯಲ್ಲಿ ಸಾರ್ವಜನಿಕರಿಗೆ ಆಗಬೇಕಾದ ಕೆಲಸಗಳು ಸರಿಯಾದ ಸಮಯಕ್ಕೆ ಆಗುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಸದಾ ಮುಂದಿದೆ. ಸಣ್ಣಪುಟ್ಟ ಪ್ರಕರಣಗಳಲ್ಲಿ ಕೋರ್ಟ್, ಕಚೇರಿ ಎಂದು ಅಲೆದು ಜೀವನ ಹಾಳು ಮಾಡಿಕೊಳ್ಳುವ ಬದಲು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗುವುದು. ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳನ್ನು ನ್ಯಾಯಾಲಯದಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕಾಗುತ್ತೆ. ಅದಕ್ಕೆ ಕಾನೂನು ಅಡಿಯಲ್ಲಿ ಶಿಕ್ಷೆಯಾಗುತ್ತೆ ಎಂದರು.

ಇದೆ ವೇಳೆ ವೃದ್ಧರು, ಅಂಗವಿಕಲರು ಸೇರಿದಂತೆ ಇತರರು ಭಾಗವಹಿಸಿ ತಮ್ಮ ಬಾಕಿ ಇರುವ ಕೆಲಸದ ಬಗ್ಗೆ ಅರ್ಜಿ ಸಲ್ಲಿಸಿದರು. ಸ್ಥಳದಲ್ಲಿಯೇ ಆಗುವಂತಹ ಕೆಲಸಗಳಿಗೆ ಅಧಿಕಾರಿಗಳು ಪರಿಹಾರಿಸುವ ಕೆಲಸಗಳನ್ನು ಮಾಡಿದರು. ಈ ವೇಳೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡಮನಿ, ತಹಶೀಲ್ದಾರ್ ಸಂಜೀವಕುಮಾರ ದಾಸರ ಸೇರಿದಂತೆ ಹಲವರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!