ಹಾಡು ನಿಲ್ಲಿಸಿದ ಗಾನ ಕೋಗಿಲೆ

524

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್(92) ಅವರು ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೇ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ವೈದ್ಯರು ಹೇಳಿದ್ದರು. ಇಂದು ವಿಧಿವಶರಾಗಿದ್ದಾರೆ.

ಅಲ್ದೇ, ಮಂಗಳವಾರ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ನ್ಯೂಮೋನಿಯಾದಿಂದ ಬಳಲುತ್ತಿದ್ದ ಅವರಿಗೆ ಚೇತರಿಸಿಕೊಂಡಿದ್ದರು. ಆದರೆ, ಕೊನೆಗೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಖ್ಯಾತ ಗಾಯಕಿಯ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಹಿಡಿದು ಪ್ರತಿಯೊಬ್ಬರು ಕಂಬನಿ ಮಿಡಿದಿದ್ದಾರೆ.

ಇವರ ಸಂಗೀತ ಸಾಧನೆಗೆ ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ, ದಾದಾ ಸಾಹೇಬ್ ಪಾಲ್ಕೆ ಪ್ರಶ್ತಿಗಳು ಸೇರಿದಂತೆ ಸಾಕಷ್ಟು ಪ್ರಶಸ್ತಿಗಳು ಮುಡಿಗೇರಿವೆ. ಎ ಮೇರಿ ವತನ್ ಕಿ ಲೋಗೋ ಅನ್ನೋ ಹಾಡಿ ಅತ್ಯಂತ ಪ್ರಸಿದ್ಧಿಯನ್ನು ಪಡೆಯಿತು. ಇವರ ಸಹೋದರಿ ಆಶಾ ಬೋಸ್ಲೆ ಸಹ ಗಾಯಕಿಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!