ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು

285

ಪ್ರಜಾಸ್ತ್ರ ಸುದ್ದಿ

ನಾಗಮಂಗಲ: ತಾಲೂಕಿನ ಬೆಳ್ಳೂರು ಹೋಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಳಿಂಗನ ಹಳ್ಳಿ ಗೇಟ್ ಬಳಿ, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ.

ಸುಮಾರು 5 ರಿಂದ 6 ವರ್ಷದ ಗಂಡು ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ವಿಷಯ ತಿಳಿದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಚಿರತೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಮ, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ, ಅರಣ್ಯ ರಕ್ಷಕ ಸತೀಶ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!