2 ಚಿರತೆ ಮರಿಗಳು ಪತ್ತೆ

614

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡುಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.

ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿವೆ. ಆದ್ರೆ, ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆಯಾಗಿರೋದು ಜನರಲ್ಲಿ ಆತಂಕ ಮೂಡಿಸಿದೆ. ಇವುಗಳ ತಾಯಿ ಚಿರತೆ ಗ್ರಾಮದ ಸುತ್ತ ಇರಬಹುದು. ಇದ್ರಿಂದಾಗಿ ಆತಂಕ ಮನೆ ಮಾಡಿದೆ. ಕೃಷ್ಣರಾಜಪೇಟೆ ವಲಯ ಅರಣ್ಯ ಇಲಾಖೆಗೆ ತಿಳಿಸಲಾಗಿದೆ.

ಪ್ರಭಾರ ವಲಯ ಅರಣ್ಯಾಧಿಕಾರಿ ಶ್ರೀನಿವಾಸ, ಸಹಾಯಕ ಅರಣ್ಯಾಧಿಕಾರಿ ರಾಘವೇಂದ್ರ ಮತ್ತು ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬೋನನ್ನುಜಮೀನಿನಲ್ಲಿಟ್ಟು ಮರಿಗಳಿಗೆ ಹಾಲುಣಿಸಲು ಆಗಮಿಸುವ ಸಾಧ್ಯತೆಗಳಿರುವುದರಿಂದ ಚಿರತೆ ಬಂಧಿಸಲು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಕಿಕ್ಕೇರಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಮಂಜು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!