ಯಾಸಿನ್ ಮಲಿಕಗೆ ಜೀವಾವಧಿ ಶಿಕ್ಷೆ

375

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಭಯೋತ್ಪಾದನೆ ಹಾಗೂ ಪ್ರತ್ಯೇಕವಾದ ಚಟುವಟಿಕೆಗಳಿಗೆ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕಗೆ ದೆಹಲಿ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

10 ಅಪರಾಧ ಪ್ರಕರಣಗಳಲ್ಲಿ 10 ವರ್ಷಗಳ ಕಠಿಣ ಕಾರಾಗ್ರಹ ಶಿಕ್ಷೆ, 2 ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಕಣಿವೆ ನಾಡಿನಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬರದಂತೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ ಮುಖಂಡ ಯಾಸಿನ್ ಮಲಿಕ್ 2017ರಲ್ಲಿ ಉಗ್ರವಾದದ ಚಟುವಟಿಕೆಗಳಿಗೆ ಸಹಾಯ ಮಾಡಿರುವುದು ಸಾಬೀತು ಆಗಿತ್ತು. ಹೀಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಜೀವಾವಧಿ ಶಿಕ್ಷೆ ನೀಡಬೇಕೆಂದು ಬುಧವಾರ ಕೋರಿತ್ತು. ಕಳೆದವಾರ ಅಪರಾಧಿ ಎಂದು ತೀರ್ಪು ನೀಡಿದ್ದ ಕೋರ್ಟ್ ಶಿಕ್ಷೆಯನ್ನು ಇಂದು ಪ್ರಕಟಿಸಿದೆ.




Leave a Reply

Your email address will not be published. Required fields are marked *

error: Content is protected !!