‘ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ’

89

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಕಳೆದ 10 ದಿನಗಳ ಹಿಂದೆ ವಿಕಾಸಸೌಧದಲ್ಲಿರುವ ನನ್ನ ಕಚೇರಿಗೆ ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಕೆಟ್ಟ ಪದಗಳನ್ನು ಬಳಸಿ ನನ್ನ ಕುಟುಂಬದ ಸದಸ್ಯರನ್ನು ನಿಂದಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖಿಸಿದ್ದಾರೆ. ಬಿಜೆಪಿಯವರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಸಜ್ಜಾಗಿದ್ದಾರೆ ಎಂದು ಕಿಡಿ ಕಾರಿದರು. ಬೆದರಿಕೆ ಪತ್ರ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!