ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ

77

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, 25 ಕ್ಷೇತ್ರಗಳಲ್ಲಿ ಬಿಜೆಪಿ 3 ಕಡೆ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಇಂದು ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯಿತು.

ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವರಾದ ಜಿ.ಟಿ ದೇವೇಗೌಡ, ಗೋವಿಂದ್ ಕಾರಜೋಳ ಭಾಗವಹಿಸಿದ್ದರು.

ನಾವು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ. ಎಲ್ಲ 28 ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದು ಸಭೆಯ ಬಳಿಕ ದೇವೇಗೌಡ ಹೇಳಿದರು. ಇದೇ ಮಾತನ್ನು ಕುಮಾರಸ್ವಾಮಿ ಪುನರ್ ಉಚ್ಛರಿಸಿದರು. ಈ ಸಭೆ ಬಹಳ ಹಿಂದೆಯೇ ಆಗಬೇಕಿತ್ತು. ದೇವೇಗೌಡರ ಆಶೀರ್ವಾದ ನಮಗೆ ಆನೆ ಬಲ ತಂದಿದೆ ಎಂದು ವಿಜಯೇಂದ್ರ ಹೇಳಿದರು.




Leave a Reply

Your email address will not be published. Required fields are marked *

error: Content is protected !!