7 ಹಂತಗಳಲ್ಲಿ ಲೋಕಸಭೆ ಚುನಾವಣೆ, ಏ.19ರಿಂದ ಮತದಾನ

99

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಚುನಾವಣೆ ಆಯೋಗ ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಏಪ್ರಿಲ್ 19ರಂದಿ ಜೂನ್ 1ರ ತನಕ ದೇಶದಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣೆ ಆಯೋಗ್ಯದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಏ.19, 26, ಮೇ 7, ಮೇ 13, ಮೇ 20, ಮೇ 25 ಹಾಗೂ ಜೂನ್ 1ರಂದು ಮತದಾನ ನಡೆಯಲಿದೆ.

97 ಕೋಟಿ ಮತದಾರರಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 1.8 ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. 1.5 ಅಧಿಕಾರಿಗಳು, ಸಿಬ್ಬಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!