ಮೈಸೂರು ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ಸ್ಪರ್ಧೆ: ಯದುವೀರ

78

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ ಗುರುವಾರ ಬೆಂಗಳೂರಿನಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಹಾಗೂ ಹಾವೇರಿ ಕ್ಷೇತ್ರದ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಸೇರಿ ಅನೇಕರು ಹಾಜರಿದ್ದರು.

ಈ ವೇಳೆ ಮಾತನಾಡಿದ ಯದುವೀರ, ಮೈಸೂರು ಅಭಿವೃದ್ಧಿ ಹಾಗೂ ಸಾರ್ವಜನಿಕರ ಸೇವೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಅಧಿಕಾರ ಇದ್ದಾಗ ಹೆಚ್ಚಿನ ಅವಕಾಶ ಸಿಗುತ್ತೆ. ಪ್ರತಾಪ್ ಸಿಂಹ ಅವರು ಸಹಕರಿಸಲಿದ್ದಾರೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!