ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

106

ಪ್ರಜಾಸ್ತ್ರ ಸುದ್ದಿ

ವಯನಾಡ್: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಬುಧವಾರ ಕೇರಳದ ವಾಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಸಹೋದರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿ ಇತರರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮೊದ್ಲುಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್ ತನಕ ರೋಡ್ ಶೋ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನ್ಯಾಯದ ಹೊಸ ಯುಗಕ್ಕೆ ಕಾಲಿಡುತ್ತಿರುವಾಗ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಿಮ್ಮೆಲ್ಲರ ಸೇವೆ ಮಾಡುತ್ತೇನೆ. ವಯನಾಡ್ ನನ್ನ ಮನೆ ಇದ್ದಂತೆ. ಹೈರೇಂಜ್ ಜಿಲ್ಲೆಯಲ್ಲಿನ ಮಾನವ ಪ್ರಾಣಿ ಸಂಘರ್ಷ ಸೇರಿ ಪ್ರತಿಯೊಂದು ವಿಚಾರದಲ್ಲಿ ನಿಮ್ಮೊಂದಿಗೆ ಇರುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!