ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದ್ದಕ್ಕೆ ಫಲಿತಾಂಶ ಸ್ಪಷ್ಟ

255

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ನಡೆದ 10 ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಾಂಗ್ರೆಸ್ 7 ಕಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಈ ಬಗ್ಗೆ ಮಾತ್ನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ ಅನ್ನೋದಕ್ಕೆ ಸ್ಥಳೀಯ ಚುನಾವಣೆ ಫಲಿತಾಂಶ ಸ್ಪಷ್ಟ ಎಂದಿದ್ದಾರೆ.

ಕರೋನಾ ಸಂದರ್ಭದಲ್ಲಿ ಜನರ ಜೀವದ ಜೊತೆ ಬಿಜೆಪಿ ಚೆಲ್ಲಾಟವಾಡುತ್ತಿದೆ. ಎಲೆಕ್ಷನ್ ನಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದಿದ್ದಾರೆ. ಇನ್ನು ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!