ಮಂಗಳವಾರ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ

251

 ಪ್ರಜಾಸ್ತ್ರ ಸದ್ದಿ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಗಳವಾರ ಚುನಾವಣೆ ನಡೆಯಲಿದೆ ಎಂದು, ರಾಜ್ಯ ಚುನಾವಣೆ ಆಯೋಗ ತಿಳಿಸಿದೆ. ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ಆದ್ರೆ, ಮತದಾನಕ್ಕೆ 1 ಗಂಟೆ ಹೆಚ್ಚುವರಿ ಅವಕಾಶ ನೀಡಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ವೋಟಿಂಗ್ ನಡೆಯಲಿದೆ.

ಮೀಸಲಾತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದ ಸ್ಥಳೀಯ ಸಂಸ್ಥೆಗಳಿಗೆ ಹಾಗೂ 2 ವಾರ್ಡ್ ಗಳ ಉಪ ಚುನಾವಣೆ ಏಪ್ರಿಲ್ 27ರಂದು ನಡೆಯಲಿದೆ. ಹೀಗಾಗಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲು ಚುನಾವಣಾ ಅಧಿಕಾರಿಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ, ಪೊಲೀಸರಿಗೆ ತಿಳಿಸಲಾಗಿದೆ ಎಂದು ಆಯೋಗ ಹೇಳಿದೆ.

ನಾಳೆ ಸಂಜೆಯಿಂದ ರಾಜ್ಯದಲ್ಲಿ 14 ದಿನ ಲಾಕ್ ಡೌನ್ ಘೋಷಿಸಲಾಗಿದೆ. ಈ ವೇಳೆ ಮುಂಬರುವ ಚುನಾವಣೆ ಮುಂದೂಡಿ ಎಂದು ಆಯೋಗಕ್ಕೆ ಶಿಫಾರಸು ಮಾಡಲಾಗಿದೆ ಎಂದು ಸಿಎಂ ಹೇಳಿದ್ರು. ಆದ್ರೆ, ಆಯೋಗ ನಿಗದಿಯಂತೆ ಚುನಾವಣೆ ನಡೆಸ್ತಿದೆ.




Leave a Reply

Your email address will not be published. Required fields are marked *

error: Content is protected !!