ಕಲಬುರಗಿಯಲ್ಲಿ ಲಾಕ್ ಡೌನ್ ವಿಸ್ತರಣೆ

313

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಪ್ರದೇಶ ವ್ಯಾಪ್ತಿಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜುಲೈ 20ರಿಂದ ಜುಲೈ 27ರ ತನಕ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ ಬಿ ತಿಳಿಸಿದ್ದಾರೆ.

ಈ ಮೊದಲಿನಿಂತೆ ಬೆಳಗ್ಗೆ 6 ಗಂಟೆಯಿಂದ 2 ಗಂಟೆಯ ತನಕ ಅಂಗಡಿಗಳನ್ನ ತೆರೆಯುವುದು. ಆಸ್ಪತ್ರೆ, ಔಷಧಿ ಅಂಗಡಿಗಳಿಗೆ ನಿರ್ಬಂಧವಿಲ್ಲ. ರಾಜ್ಯ ಸರ್ಕಾರದ ಭಾನುವಾರದ ಬಂದ್ ಇದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ. ಹೀಗಾಗಿ ಅಂದು ಪೂರ್ತಿ ದಿನ ಬಂದ್ ಇರುತ್ತೆ.

ಕಲಬುರಗಿಯಲ್ಲಿ ಜುಲೈ 19ರ ವರೆಗಿನ ಹೆಲ್ತ್ ಬುಲೆಟಿನ್ ಪ್ರಕಾರ 2,743 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 1,771 ಜನ ಇದುವರೆಗೂ ಗುಣಮುಖರಾಗಿದ್ದಾರೆ. 926 ಪ್ರಕರಣಗಳು ಚಾಲ್ತಿಯಲ್ಲಿವೆ. 46 ಜನ ಸಾವನ್ನಪ್ಪಿದ್ದಾರೆ.




Leave a Reply

Your email address will not be published. Required fields are marked *

error: Content is protected !!