ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ: ಸಿಎಂ

529

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜೂನ್ 7ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಜೂನ್ 7ರ ಬಳಿಕವೂ ಲಾಕ್ ಡೌನ್ ವಿಸ್ತರಿಸಲಾಗುತ್ತೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಮಾತ್ನಾಡಿರುವ ಸಿಎಂ ಯಡಿಯೂರಪ್ಪ, ಲಾಕ್ ಡೌನ್ ವಿಸ್ತರಣೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲವೆಂದು ಹೇಳಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಬಂದಿಲ್ಲ. ಹೀಗಾಗಿ ಎಲ್ಲವನ್ನೂ ಅವಲೋಕಿಸಲಾಗುತ್ತೆ. ಅಧಿಕಾರಿಗಳ ಜೊತೆಗೆ ಮತ್ತೊಮ್ಮೆ ಸಭೆ ನಡೆಸಲಾಗುತ್ತೆ. ಪರಿಸ್ಥಿತಿ ಅನುಗುಣವಾಗಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ. ಹೀಗಾಗಿ ಜೂನ್ 5, 6ರ ತನಕ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!