ಬಿಜೆಪಿಯೇತರ ಸರ್ಕಾರಕ್ಕೆ ವಿಪಕ್ಷಗಳ ತಂತ್ರಗಾರಿಕೆ, ನಾಳೆ ಸಭೆ

114

ಪ್ರಜಾಸ್ತ್ರ ಸುದ್ದಿ

ಪಾಟ್ನಾ: ಮುಬರುವ ಲೋಕಸಭಾ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆದಿದೆ. ಎನ್ ಡಿಎ ಸರ್ಕಾರವನ್ನು ಪತನಗೊಳಿಸಿ ಹೊಸ ಸರ್ಕಾರ ರಚನೆ ಮಾಡುವ ಸಂಬಂಧ ವಿಪಕ್ಷಗಳು ಸಜ್ಜಾಗುತ್ತಿವೆ. ಈ ಸಂಬಂಧ ಶುಕ್ರವಾರ ಪಾಟ್ನಾದಲ್ಲಿ ಸಭೆ ನಡೆಯಲಿದೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಂಜಾಬ್ ಸಿಎಂ ಭಗವಂತ್ ಮಾನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗಾಗ್ಲೇ ಪಾಟ್ನಾ ತಲುಪಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಜಾರ್ಖಂಡ್ ಸಿಎಂ ಹೇಮಂತ್ ಸೂರೇನ್, ಎನ್ ಸಿಪಿ ನಾಯಕ ಶರದ್ ಪವಾರ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ನಾಳೆ ಪಾಟ್ನಾ ತಲುಪಲಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ನಿವಾಸದಲ್ಲಿ ಚರ್ಚೆ ನಡೆಯಲಿವೆ. ಹೀಗಾಗಿ ಪಾಟ್ನಾದಲ್ಲಿ ವಿಪಕ್ಷಗಳ ಸಂಭ್ರಮ ಜೋರಾಗಿದೆ. ಎಲ್ಲೆಡೆ ಬ್ಯಾನರ್, ಫ್ಲೆಕ್ಸ್, ಕಟೌಟ್ ಗಳು ರಾರಾಜಿಸುತ್ತಿವೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಹೊಸ ಸರ್ಕಾರ ರಚನೆ ಮಾಡುವ ಸಂಬಂಧ ರಣತಂತ್ರಗಳನ್ನು ಹಣೆಯಲಿದ್ದಾರೆ. ಹೀಗಾಗಿ ಈ ಸಭೆ ಕುತೂಹಲ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!