ಕಾಂಗ್ರೆಸ್ ಗ್ಯಾರೆಂಟಿ ಐದು ವರ್ಷ ವಾರೆಂಟಿ: ಸಿಎಂ ಸಿದ್ದರಾಮಯ್ಯ

90

ಪ್ರಜಾಸ್ತ್ರ ಸುದ್ದಿ

ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ರೋಡ್ ಶೋ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭ್ಯರ್ಥಿ ಗೌತಮ್ ಪರ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಸಾಮಾನ್ಯ ಕಾರ್ಯಕರ್ತನಾಗಿ ತಳಮಟ್ಟದಿಂದ ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಗೌತಮ್ ಹಾಗೂ ಕಾಂಗ್ರೆಸ್ ಮೇಲೆ ಇರಲಿ ಎಂದರು. ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು. ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು.

ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುವ ಹೊಸ ಸುಳ್ಳು ಸೃಷ್ಟಿಸಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!