ನಾಲ್ಕು ಗೋಡೆಗಳ ಮಧ್ಯದ ಚರ್ಚೆ ಬಗ್ಗೆ ಹೇಳಲ್ಲ: ವಿಜಯೇಂದ್ರ

87

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ಮೊದಲ ಪಟ್ಟಿ ಬಿಟ್ಟರೂ ಕರ್ನಾಟಕದಲ್ಲಿ ಒಂದೇ ಒಂದು ಕ್ಷೇತ್ರ ಘೋಷಿಸಿಲ್ಲ. ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್ ನೀಡುತ್ತೆ. ಈ ಮೂಲಕ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ನೀಡುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ನಾಲ್ಕು ಗೋಡೆಗಳ ಮಧ್ಯೆ ನಡೆದ ಚರ್ಚೆಯ ಬಗ್ಗೆ ಮಾತನಾಡುವುದಿಲ್ಲ. 28 ಕ್ಷೇತ್ರಗಳಿಗೂ ಒಳ್ಳೆಯ ಅಭ್ಯರ್ಥಿಗಳನ್ನು ಕೊಡುತ್ತೇವೆ. ಇನ್ನು ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಆಗಲಿದೆ. 2 ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಲು ಪ್ಲಾನ್ ನಡೆಯುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಸಿದ್ದರಾಮಯ್ಯ ನಡುವೆ ಒಳ ಒಪ್ಪಂದವಾಗಿದೆ ಎಂದು ಆರೋಪಿಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!