ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತರ ದಾಳಿ

63

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪ್ರಕರಣ ಕೈ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಲಾಗಿದೆ.

ಪೊಲೀಸ್ ಕಾನ್ಸ್ ಟೇಬಲ್ ಚಂದ್ರಶೇಖರ್,  ಮಂಜುನಾಥ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಮಂಜುನಾಥ್ ಹಾಗೂ ಸಹೋದರನ ನಡುವೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ವಿಚಾರಣೆಗೆಂದು ಕರೆದು ಠಾಣೆಯ ಸೆಲ್ ನಲ್ಲಿ ಕೂರಿಸಿದ್ದಾರಂತೆ. ಆತನನ್ನು ಬಿಡಲು 1 ಲಕ್ಷದ 10 ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 30 ಸಾವಿರ ರೂಪಾಯಿ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ.
Leave a Reply

Your email address will not be published. Required fields are marked *

error: Content is protected !!