ಲೋಕಾಯುಕ್ತ ಬಲೆಗೆ ಸಬ್ ರಿಜಿಸ್ಟಾರ್ ಕಚೇರಿಯ 8 ಜನ ಬ್ರೋಕರ್ ಗಳು

283

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ವರ್ತೂರು ಸಬ್ ರಿಜಿಸ್ಟಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಈ ವೇಳೆ 8 ಜನ ಬ್ರೋಕರ್  ಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು. ಅಲ್ಲದೇ ಬ್ರೋಕರ್ ಗಳ ಹಾವಳಿಯೂ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!