ಮುದ್ದೇಬಿಹಾಳ: ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

79

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಮುಂಜಾನೆ 11 ಗಂಟೆಯಿಂದ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು, ಪೊಲೀಸ್ ಇನ್ಸ್ ಪೆಕ್ಟರ್ ಗಳು ಅಹವಾಲು ಸ್ವೀಕರಿಸಲಿದ್ದಾರೆ. ಈ ವೇಳೆ ಸಾರ್ವಜನಿಕರು ಭರ್ತಿ ಮಾಡಿದ, ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ದೂರುಗಳಿಗಾಗಿ 08352-255333, 257786, 295074 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply

Your email address will not be published. Required fields are marked *

error: Content is protected !!