ಲೋಕಾಯುಕ್ತ ಆರ್ಭಟ ಶುರು: ಬಿಬಿಎಂಪಿ ಜಂಟಿ ಆಯುಕ್ತ ಅರೆಸ್ಟ್

185

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗಷ್ಟೇ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಎಲ್ಲ ಪ್ರಕರಣಗಳು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಲೋಕಾಯುಕ್ತಕ್ಕೆ ಸಂಪೂರ್ಣ ಪವರ್ ನೀಡಲಾಗಿದೆ. ಇದೀಗ ಬೇಟೆ ಶುರು ಮಾಡಿದ್ದು, ನಗರದ ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಬಂಧಿಸಲಾಗಿದೆ.

ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಕಚೇರಿಯ ಮೇಲೆ 8 ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ, ಶಂಕರ್ ನಾರಾಯಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಎಸ್ಪಿ ಶ್ರೀನಾಥ್ ಜೋಶಿ ಮಾರ್ಗದಲ್ಲಿ ದಾಳಿ ನಡೆಸಿ, ಭ್ರಷ್ಟಾಚಾರ ಪ್ರಕರಣದಲ್ಲಿ ಜಂಟಿ ಆಯಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ನನ್ನು ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!