ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

119

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಹಾವೇರಿ, ತುಮಕೂರು, ಬೀದರ, ದಕ್ಷಿಣ ಕನ್ನಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ 16 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ, ಹಾವೇರಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೇಶ್ ಶೆಟ್ಟರ್, ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್, ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್, ಬೀದರ ಭೂಸೇನಾ ನಿಗಮದ ಅಧಿಕಾರಿ, ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಸೇರಿ ರಾಜ್ಯದ ವಿವಿಧಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಆದಾಯ ಮೀರಿ ಆಸ್ತಿಗಳಿಕೆ ಸಂಬಂಧ ಈ ಕಾರ್ಯಾಚರಣೆ ನಡೆದಿದೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!