ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್

83

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪಿಯಾಗಿರುವ ಹಾಸನ ಸಂಸದ, ಲೋಕಸಭಾ ಚುನಾವಣೆಯ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ನೀಡಿದ್ದಾರೆ.

ಹೊಳೆನರಸಿಪುರದಲ್ಲಿ ಕೇಸ್ ದಾಖಲಾಗಿದೆ. ತಂದೆ ಹೆಚ್.ಡಿ ರೇವಣ್ಣ ಹಾಗೂ ಮಗ ಪ್ರಜ್ವಲ್ ರೇವಣ್ಣ ಎ1 ಹಾಗೂ ಎ2 ಆರೋಪಿಯಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ವಿದೇಶದಲ್ಲಿ ಇರುವುದರಿಂದ ವಕೀಲರ ಮೂಲಕ ಒಂದು ವಾರ ಸಮಯ ಕೇಳಿದ್ದಾರೆ. ಆದರೆ, ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಗಳು, ವಿಮಾನ ನಿಲ್ದಾಣಗಳಿಗೆ ಲುಕ್ ಔಟ್ ನೋಟಿಸ್ ಕಳುಹಿಸಲಾಗಿದೆ. ಒಂದು ವೇಳೆ ಪತ್ತೆಯಾಗದಿದ್ದರೆ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!