ಲಾರಿ ಅಪಘಾತಕ್ಕೆ ಬಾಲಕ ಸಾವು: ಬೆಳಗಾವಿಯಲ್ಲಿ ಹಿಂಸಾಚಾರ

265

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಲಾರಿ ಅಪಘಾತದಲ್ಲಿ 10 ವರ್ಷದ ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಕ್ಯಾಂಪ್ ಪ್ರದೇಶದ ಹತ್ತಿರ ನಡೆದಿದೆ. ಅಲ್ಲದೇ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಘಟನೆಯಿಂದ ರೊಚ್ಚಿಗೆದ್ದ ಜನರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಲಾರಿ ಜಖಂಗೊಂಡಿದೆ. ಪೊಲೀಸರ ಎದುರಲ್ಲೇ ಈ ಘಟನೆ ನಡೆದಿದ್ದು, ಕ್ಯಾಂಪ್ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!