ನಿಂತಿದ್ದ ಲಾರಿಗೆ ಕಾರು ಡಿಕ್ಕಿ

204

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಮಲ್ಲಾಪುರ ಗೊಲ್ಲರಹಟ್ಟಿ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಕಲೀಲ್(42), ಶಂಶುದ್ಧೀನ್(40), ಮಲ್ಲಿಕಾ(37), ತಬ್ರೆಜ್(13) ಈ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರೆಹಮಾನ್, ರೆಹಾನ್, ನರ್ಗಿಸ್ ಗಾಯಗೊಂಡಿದ್ದು, ರೆಹಮಾನ್ ಸ್ಥಿತಿ ಗಂಭೀರವಾಗಿದೆ. ಇವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದರು. ಆದರೆ, ಅದೇನಾಗಿದೆಯೋ ಗೊತ್ತಿಲ್ಲ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!