ಲಾರಿ-ಬಸ್ ನಡುವೆ ಅಪಘಾತ

192

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಲಾರಿ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ರ ಹತ್ತಿರ ನಡೆದಿದೆ.

ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 6ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಕಾರೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಇದು ಮಾಸುವ ಮುನ್ನವೇ ಮತ್ತೊಂದು ಅಪಘಾತವಾಗಿದೆ.




Leave a Reply

Your email address will not be published. Required fields are marked *

error: Content is protected !!