ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆ

174

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಕರ್ನಾಟಕ ಸೇರಿದಂತೆ ದೇಶದ ಜನತೆಗೆ ಬುಧವಾರ ಮುಂಜಾನೆ ಸಿಲಿಂಡರ್ ಬೆಲೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 100 ರೂಪಾಯಿ ಏರಿಕೆ ಮಾಡಲಾಗಿದೆ.

ಕಳೆದ ಎರಡು ತಿಂಗಳಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗುತ್ತಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿಲ್ಲ. 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯಿದೆ. ಹೀಗಾಗಿ ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿಲ್ಲವೆಂದು ಹೇಳಲಾಗುತ್ತಿದೆ.

ದೇಶದ ಐದು ನಗರಗಳನ್ನು ತೆಗೆದುಕೊಂಡರೆ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೀಗಿದೆ.. ಚೆನ್ನೈನಲ್ಲಿ 1,999 ರೂಪಾಯಿ, ಕೊಲ್ಕತ್ತಾ 1,943 ರೂಪಾಯಿ, ಬೆಂಗಳೂರು 1,914 ರೂಪಾಯಿ, ದೆಹಲಿ 1,833 ಹಾಗೂ ಮುಂಬೈ 1,785.50 ಪೈಸೆ ಇದೆ. ಒಟ್ಟಿನಲ್ಲಿ ಸತತವಾಗಿ ಬೆಲೆ ಏರಿಕೆಯಿಂದ ಗ್ರಾಹಕರು, ಸಣ್ಣಪುಟ್ಟ ವ್ಯಾಪಾರಿಗಳ ಜೇಬಿಗೆ ಕತ್ತರಿ ಬೀಳುತ್ತಿದೆ.




Leave a Reply

Your email address will not be published. Required fields are marked *

error: Content is protected !!