ರಾಜ್ಯದಲ್ಲಿ ಮೊದಲ ಹಂತದ ಮತದಾನ, ಬಹಿರಂಗ ಪ್ರಚಾರಕ್ಕೆ ಇಂದು ತೆರೆ

92

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ನಡೆಯಲಿದೆ. ಹೀಗಾಗಿ ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹೀಗಾಗಿ ಕೊನೆಯ ದಿನ ಭರ್ಜರಿಯಾಗಿ ಮತ ಬೇಟೆ ನಡೆಸಲು ಪಕ್ಷಗಳು ಮುಂದಾಗಿವೆ.

14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಮೇ 7ರಂದು 2ನೇ ಹಂತದಲ್ಲಿ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಭಾರೀ ಪ್ರಚಾರ ನಡೆಸುತ್ತಿದ್ದು, 28 ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯುವ ತಂತ್ರಗಾರಿಕೆ ಜೋರಾಗಿ ನಡೆದಿದೆ.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ. ಹೀಗಾಗಿ ಎರಡು ದಿನಗಳ 144 ಸೆಕ್ಷನ್ ಜಾರಿಯಲ್ಲಿರಲಿದೆ. ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.




Leave a Reply

Your email address will not be published. Required fields are marked *

error: Content is protected !!