ನಾಳೆ ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

62

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಇದೆ ಮೊದಲ ಬಾರಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಬುಧವಾರ ಮಂಡ್ಯ ಹಾಗೂ ಕೋಲಾರದಲ್ಲಿ ಚುನಾವಣೆ ಪ್ರಚಾರ ನಡೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬುಧವಾರ ಮಧ್ಯಾಹ್ನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಸೀದಾ ಮಂಡ್ಯಕ್ಕೆ ತೆರಳಿದ್ದಾರೆ. ಮಂಡ್ಯ ಪ್ರಚಾರದ ಬಳಿಕ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತಯಾಚನೆ ನಡೆಸಲಿದ್ದಾರೆ. ನಂತರ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!