ವಿಜಯಪುರ ಜಿಲ್ಲೆಯಾದ್ಯಂತ ಮೇ 5ರಿಂದ 7ರ ತನಕ 144 ಸೆಕ್ಷನ್ ಜಾರಿ

91

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಲೋಕಸಭಾ ಚುನಾವಣೆ-2024ರ ರಾಜ್ಯದಲ್ಲಿ 2ನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಜಿಲ್ಲೆಯ ಎಲ್ಲಾ 2,085 ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ಹಿನ್ನಲೆಯಲ್ಲಿ ಮೇ 5ರ ಸಂಜೆ 6 ರಿಂದ ಮೇ 7 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಕಲಂ 144 ಜಾರಿ ಮಾಡಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ.ಭೂಬಾಲನ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಮೇ 5 ರಂದು ಸಂಜೆ ೬ ರಿಂದ ಮತದಾನ ಮುಗಿಯವವರೆಗೂ 5ಕ್ಕಿಂತ ಹೆಚ್ಚು ಜನರು ಗುಂಪು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರಗಿಸುವುದು ನಿಷೇಧಿಸಿದೆ. ಅದಲ್ಲದೇ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಸಂಚರಿಸುವುದು, ಮತಗಟ್ಟೆಗಳ 100 ಮೀಟರ್ ಸುತ್ತಮುತ್ತ ರಾಜಕೀಯ ಪಕ್ಷಗಳ ಪೋಸ್ಟರ್, ಬ್ಯಾನರ್ ಹಾಗೂ ಪ್ರಚಾರ,, ಸಾರ್ವಜನಿಕವಾಗಿ ಪ್ರಚೋಧನಕಾರಿ ಹೇಳಿಕೆ, ವ್ಯಕ್ತಿಗಳ ತೇಜೋವಧೆ, ಮತಗಟ್ಟೆಯ ಸುತ್ತಮುತ್ತ ಧ್ವನಿವರ್ಧಕಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿಸಲಾಗಿದೆ




Leave a Reply

Your email address will not be published. Required fields are marked *

error: Content is protected !!