ಬೊಮ್ಮಾಯಿ, ಜೋಶಿ ನಾಮಪತ್ರ ಸಲ್ಲಿಕೆ

63

ಪ್ರಜಾಸ್ತ್ರ ಸುದ್ದಿ

ಹಾವೇರಿ/ಧಾರವಾಡ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ಎಲ್ಲೆಡೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಘಟಾನುಘಟಿ ನಾಯಕರುಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಹಾವೇರಿ-ಗದಗ ಲೋಕಸಭಾ ಕ್ಷೇತದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಸಿದರು.

ಬೊಮ್ಮಾಯಿಗೆ ಮಾಜಿ ಸಚಿವ ಬಿ.ಸಿ ಪಾಟೀಲ, ಶಾಸಕ ಚಂದ್ರ ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೇರಿ ಇತರರು ಸಾಥ್ ನೀಡಿದರು.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇವರಿಗೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ ಸೇರಿ ಅನೇಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!