ಲೋಕಸಭೆ ಚುನಾವಣೆ: ನಾಮಪತ್ರ ಸಲ್ಲಿಕೆ ಜೋರು

46

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದಲ್ಲಿ ನಡೆಯುವ ಕ್ಷೇತ್ರಗಳಲ್ಲಿ ಸೋಮವಾರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಉಮೇದುವಾರಿಕೆ ಸಲ್ಲಿಸಿದರು. ಪತಿ ಶಿವರಾಜಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸಾಥ್ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ತಾಯಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದರು.

ಇನ್ನು ಕೇಂದ್ರ ಸಚಿವ ಭಗವಂತ್ ಖೂಬಾ ಬೀದರನಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಗೋವಿಂದ್ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿದರು. ಎಂಎಲ್ಸಿ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಸೇರಿ ಇತರರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!