21 ರಾಜ್ಯದಲ್ಲಿ ನಡೆಯುತ್ತಿದೆ ಮೊದಲ ಹಂತದ ಮತದಾನ

57

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದ 21 ರಾಜ್ಯಗಳ 102 ಲೋಕಸಭಾ ಹಾಗೂ ಕೇಂದ್ರಾಡಳಿತ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6 ಗಂಟೆಯ ತನಕ ನಡೆಯಲಿದೆ.

ಆಸ್ಸಾಂ, ಬಿಹಾರ, ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ಛತ್ತೀಸಗಢ, ಮಣಿಪುರ, ಮೇಘಾಲಯ, ಮಿಜೋರಾಂ, ತ್ರಿಪುರಾ, ನಾಗಾಲ್ಯಂಡ, ಸಿಕ್ಕಿ, ರಾಜಸ್ಥಾನ, ಮಹಾರಾಷ್ಟ್ರ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಕಾಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದೀಪ, ಪುದುಚೇರಿ, ಹಾಗೂ ಜಮ್ಮು ಕಾಶ್ಮೀರಿನ ಹಲವು ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ.

8.4 ಕೋಟಿ ಪುರುಷರು, 8.2 ಕೋಟಿ ಮಹಿಳೆಯರು ಸೇರಿ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆಗಳ ಜೊತೆಗೆ ಸೂಕ್ತ ಭದ್ರತೆಯ ಬಂದೋಬಸ್ತಿ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!