ಮದಗಜ ಟ್ರೇಲರ್ ರಿಲೀಸ್

479

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಮದಗಜ ಚಿತ್ರದ ಟ್ರೇಲರ್ ಶುಕ್ರವಾರ ಸಂಜೆ ರಿಲೀಸ್ ಆಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಮದಗಜ ಟೀಂ, ಇತ್ತೀಚೆಗೆ ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಮೂಲಕ ಟ್ರೇಲರ್ ಬಿಡುಗಡೆಗೊಳಿಸಿದೆ.

ಮಾಸ್ ಎಂಟರ್ ಟೈನ್ಮೆಂಟ್ ಆಗಿರುವ ಮೂವಿ ಟ್ರೇಲರ್ ಅದಾಗ್ಲೇ 10 ಲಕ್ಷಕ್ಕೂ ಅಧಿಕ ಜನ ವೀಕ್ಷಣೆ ಮಾಡಿದ್ದಾರೆ. ಎಸ್.ಮಹೇಶ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಉಮಾಪತಿ ಎಸ್ ಗೌಡ ನಿರ್ಮಾಣ ಮಾಡಿದ್ದಾರೆ. ಶ್ರೀಮುರುಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಂಡಿದ್ದಾರೆ. ರವಿ ಬ್ರಸೂರ್ ಮ್ಯೂಸಿಕ್ ಇದೆ.




Leave a Reply

Your email address will not be published. Required fields are marked *

error: Content is protected !!