ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ತಾಯಿ ವಿಧಿವಶ

151

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ಹಿರಿಯ ನಟಿ ಮಾಧುರಿ ದೀಕ್ಷಿತ್ ತಾಯಿ ಸ್ನೇಹಲತಾ ದೀಕ್ಷಿತ್ ಭಾನುವಾರ ನಿಧನರಾಗಿದ್ದಾರೆ. 91 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ನಿಧನರಾಗಿದ್ದು, ಖಚಿತ ಕಾರಣಗಳು ತಿಳಿದು ಬಂದಿಲ್ಲ.

ಈ ಕುರಿತು ನಟಿ ಮಾಧುರಿ ಪತಿ ಶ್ರೀರಾಮ್ ನೆನೆ ನೋವಿನ ವಿಚಾರವನ್ನು ಹಂಚಿಕೊಂಡಿದ್ದಾರೆ. ಮುಂಬೈನಲ್ಲಿರುವ ವರ್ಲಿ ಪ್ರದೇಶದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಸ್ನೇಹಲತಾ ಅವರ ನಿಧನಕ್ಕೆ ಬಾಲಿವುಡ್ ಸಿನಿ ಮಂದಿ ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!