ಮಧ್ಯಪ್ರದೇಶ ಸಿಎಂ ಪ್ರಮಾಣ ವಚನ, ಪ್ರಧಾನಿ ಭಾಗಿ

138

ಪ್ರಜಾಸ್ತ್ರ ಸುದ್ದಿ

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಲಾಲ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಮಂಗುಭಾಯ್ ಪಟೇಲ್ ಪ್ರತಿಜ್ಞಾವಿಧಿ ಬೋಧಿಸಿದರು.

ರಾಜೇಂದ್ರ ಶುಕ್ಲಾ, ಜಗದೀಶ್ ದೇವ್ಡಾ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!