ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ಮಹಾಕವಿ ವೇಮನ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಪ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಜಯಂತಿ ಕಾರ್ಯಕ್ರಮ ನಡೆಯಿತು.
ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಅಧ್ಯಕ್ಷ ಸುರೇಶ ದೇಸಾಯಿ, ಸಿಂದಗಿ ಕಾಸಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ ಸೇರಿದಂತೆ ರೆಡ್ಡಿ ಸಮಾಜದ ಜಿಲ್ಲೆಯ ಮುಖಂಡರು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.