ಸಿಂದಗಿಯಲ್ಲಿ ಎರಡು ದಿನ ಮಹಿಳಾ ಹಬ್ಬ

265

ಪ್ರಜಾಸ್ತ್ರ ಸುದ್ದಿ

ಸಿಂದಗಿ: ನಿವೇದಿತಾ ಯುವತಿ ಮಂಡಳಿಯ 21ನೇ ವಾರ್ಷಿಕೋತ್ಸದ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಎರಡು ದಿನ ಮಹಿಳಾ ಹಬ್ಬ ಆಚರಿಸಲಾಗುತ್ತಿದೆ. ಮಾರ್ಚ್ 25 ಹಾಗೂ 26ರಂದು ಪಟ್ಟಣದ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಲೂಕು ಕಸಾಪ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ ಅಧ್ಯಕ್ಷತೆ, ಕಸಾಪ ಅಧ್ಯಕ್ಷ ರಾಜಶೇಖರ ಕೂಚಬಾಳ, ನಿವೇದಿತಾ ಮಹಿಳಾ ಮಂಡಳಿಯ ಅಧ್ಯಕ್ಷೆ ಶೈಲಜಾ ಸ್ಥಾವರಮಠ ಉಪಸ್ಥಿತಿ ಇರಲಿದ್ದಾರೆ. ಹಿರಿಯ ಲೇಖಕಿ ಹೇಮಲತಾ ವಸ್ತ್ರದ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಹಣಮಂತ ಸುಣಗಾರ ಅವರಿಗೆ ವಿಶೇಷ ಸನ್ಮಾನ ಜರುಗಲಿದೆ. ಮಹಿಳಾ ಹಬ್ಬದಲ್ಲಿ ಮಹಿಳಾ ಸಾಧಕರಿಗೆ ಸನ್ಮಾನ. ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!