ಗೋದಾಮು ದುರಂತ: ಪರಿಹಾರ ಘೋಷಣೆ

339

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದಲ್ಲಿನ ಕೈಗಾರಿಕ ಪ್ರದೇಶದಲ್ಲಿರುವ ರಾಜಗುರು ಫುಡ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ 50 ಕಾರ್ಮಿಕರು ಪಾರಾಗಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಗಾಯಾಳು ಕಾರ್ಮಿಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡು ಶ್ರಮವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ರಾಜ್ಯದಲ್ಲಿ ಎಲ್ಲ ಕಾರ್ಖಾನೆಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!