ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ

204

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕನ್ನಡಿಗ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ ಆಗಿದ್ದಾರೆ. ಶಶಿ ತರೂರ್ ಹಾಗೂ ಖರ್ಗೆ ನಡುವೆ ನಡೆದ ಚುನಾವಣೆಯಲ್ಲಿ ಖರ್ಗೆ ಆಯ್ಕೆಯಾಗಿದ್ದಾರೆ.

ಕಳೆದ ಸೋಮವಾರ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಯಿತು. ಖರ್ಗೆಗೆ 7,897 ಮತಗಳು ಬಿದ್ದರೆ ಪ್ರತಿಸ್ಪರ್ಧಿ ತರೂರ್ ಗೆ 1 ಸಾವಿರ ಮತಗಳು ಬಿದ್ದಿವೆ. 416 ಮತಗಳು ತಿರಸ್ಕೃತಗೊಂಡಿವೆ.

1994ರ ಬಳಿಕ ಗಾಂಧಿಯೇತರ ಕುಟುಂಬದಿಂದ ಬಂದವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಈ ಮೂಲಕ ಹೊಸ ನಾಯಕತ್ವಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಅವರ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. 50 ವರ್ಷಗಳ ರಾಜಕೀಯ ಅನುಭವ ಇರುವ ಖರ್ಗೆ ಅವರು 130 ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಾರೆ ಅನ್ನೋ ಕುತೂಹಲವಿದೆ.




Leave a Reply

Your email address will not be published. Required fields are marked *

error: Content is protected !!