ಮತ್ತೆ ಅಡ್ಡ ಗೋಡೆ ಮೇಲೆ ದೀಪವಿಟ್ಟ ಸುಮಲತಾ

101

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗುತ್ತೆ ಎಂದು ಹೇಳುತ್ತಲೇ ಬಂದಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಹಿನ್ನಡೆಯಾಗಿದೆ. ಬಿಜೆಪಿ-ಜೈಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಜೆಡಿಎಸ್ ಪಾಲಾಗಿದ್ದು, ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧೆಯ ಬಗ್ಗೆ ಇದುವರೆಗೂ ಸ್ಪಷ್ಟ ನಿರ್ಧಾರಕ್ಕೆ ಬರದ ಸಂಸದೆ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಇದೀಗ ಬುಧವಾರ ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದಲ್ಲಿ ಸಭೆ ನಡೆಸಿ ಕಾರ್ಯಕರ್ತರ ಎದುರು ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಸಲದ ಲೋಕಸಭಾ ಚುನಾವಣೆಯೂ ಹೊರತಾಗಿಲ್ಲ. ಈಗಾಗ್ಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ. ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭಾ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತೇನೆ ಎಂದು ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!