ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್

302

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಆದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್ ನೀಡಿದೆ. ಇದರ ಜೊತೆ ಮಂಗಳೂರು ಕಮಿಷನರ್ ಅವರಿಗೂ ನೋಟಿಸ್ ನೀಡಲಾಗಿದೆ.

ಈ ಪ್ರಕರಣಕ್ಕೆ ಎಡಿಜಿಪಿ ದರ್ಜೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್, ಸರ್ಕಾರ ಹಾಗೂ ಕಮಿಷನರ್ ಗೆ ನೋಟಿಸ್ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಆ ದಿನದ ಸಿಸಿಟಿವಿ ದೃಶ್ಯಾವಳಿಗಳನ್ನ ಸಂಗ್ರಹಿಸಿಡುವಂತೆ ಸೂಚಿಸಿದೆ.




Leave a Reply

Your email address will not be published. Required fields are marked *

error: Content is protected !!