ಮಣಿಪುರ ಘಟನೆಗೆ ಅಮೆರಿಕ ರಾಯಭಾರಿ ಕಳವಳ

104

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಬೆತ್ತಲೆ ಮೆರವಣಿಗೆ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ದುಷ್ಕೃತ್ಯವನ್ನು ಅಮೆರಿಕ ಸಹ ಖಂಡಿಸಿದೆ.

ಈ ಕುರಿತು ಅಮೆರಿಕ ರಾಯಭಾರಿ ಕಚೇರಿಯ ಅಧಿಕಾರಿಯೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಭಾರತದ ಆಂತರಿಕ ವಿಚಾರವಾಗಿದ್ದರೂ, ಮನುಷ್ಯರು ನೋವು ಎದುರಿಸಿದಾಗೆಲ್ಲ ಹೃದಯ ಚೂರಾಗುತ್ತದೆ ಅಂತಾ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. ಯುಎಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಪೈಶಾಚಿಕ ಕೃತ್ಯವನ್ನು ಖಂಡಿಸಿ ಈ ರೀತಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!