ಮಣಿಪುರ ಘಟನೆ: 5ನೇ ಆರೋಪಿ ಬಂಧನ

196

ಪ್ರಜಾಸ್ತ್ರ ಸುದ್ದಿ

ಇಂಪಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ 5ನೇ ಆರೋಪಿಯನ್ನು ಬಂಧಿಸಲಾಗಿದೆ. ಈ ಕುರಿತು ಶನಿವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈಗಾಗ್ಲೇ ನಾಲ್ವರನ್ನು ಬಂಧಿಸಲಾಗಿದ್ದು, 11 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ 19 ವರ್ಷದ ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ತಿಂಗಳಿಂದ ಇಲ್ಲಿ ಸಂಘರ್ಷ ನಡೆಯುತ್ತಿದೆ. ಇದನ್ನು ತಡೆದು ಶಾಂತಿ ನೆಲಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮೇ 4ರಂದು ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ಕುಕಿ-ಜೊ ಬಡುಕಟ್ಟು ಸಮುದಾಯದವರ ಮನೆಗೆ ಬೆಂಕಿ ಹಚ್ಚಿ ಹಲವರನ್ನು ಹತ್ಯೆ ಮಾಡಲಾಗಿದೆಯಂತೆ. ನಂತರ ಮಹಿಳೆಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಿದ್ದು, 72 ದಿನಗಳ ಬಳಿಕ ಅಂದ್ರ ಜುಲೈ 19ರಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತು. ಈ ಘಟನೆಯನ್ನು ಇಡೀ ದೇಶ್ಯಾದ್ಯಂತ ಖಂಡಿಸಿ ಸರ್ಕಾರ, ವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು.




Leave a Reply

Your email address will not be published. Required fields are marked *

error: Content is protected !!