ಸಾಲು ಸಾಲು ಬಿಜೆಪಿ ನಾಯಕರು ಡಿಸಿಎಂ ಭೇಟಿ

153

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಧ್ಯ ತೀವ್ರ ಚರ್ಚೆಯಲ್ಲಿರುವುದು ಆಪರೇಷನ್ ಹಸ್ತ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಬಿಜೆಪಿ ನಡುವೆ ರಾಜಕೀಯ ತಂತ್ರಗಾರಿಕೆ ನಡೆಯುತ್ತಿದೆ. ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂದು ಹೇಳಲಾಗುತ್ತಿದೆ. ಇದನ್ನು ಬಿಜೆಪಿ ತಳ್ಳಿ ಹಾಕುತ್ತಿದೆ. ಆದರೆ, ಮತ್ತೊಂದು ಕಡೆ ಸಾಲು ಸಾಲು ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿದ್ದಾರೆ.

ಶಿವರಾಮ್ ಹೆಬ್ಬಾರ್, ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜ್, ಶಿವರಾಮೇಗೌಡ, ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಅನೇಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿದ್ದಾರೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಯಾರು ಯಾವಾಗ ಕಾಂಗ್ರೆಸ್ ಸೇರುತ್ತಾರೆ ಅನ್ನೋ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ.




Leave a Reply

Your email address will not be published. Required fields are marked *

error: Content is protected !!