ಹುತಾತ್ಮ ಪೊಲೀಸರ ವಿಮಾ ಮೊತ್ತ 50 ಲಕ್ಷಕ್ಕೆ ಏರಿಕೆ

135

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನೀಡುವ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪೊಲೀಸ್ ಸಂಸ್ಮರಣ ದಿನದ ಹಿನ್ನಲೆಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ಮೈಸೂರು ರಸ್ತೆಯಲ್ಲಿನ ಹುತಾತ್ಮರ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪೊಲೀಸ್ ವ್ಯವಸ್ಥೆಯು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ರಾಜ್ಯ ಹಾಗೂ ಸರ್ಕಾರದ ಘನತೆ ಹೆಚ್ಚಿಸುತ್ತದೆ ಎಂದರು.

ಸಮಾಜದಲ್ಲಿ ಶಾಂತಿ ಕದಡುವ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದರು. ಸುಮಗ ಸಂಚಾರಕ್ಕೆ ಸೂಕ್ತ ವ್ಯವಸ್ಥೆಯಾಗಬೇಕು. ಇದಕ್ಕಾಗಿ ಹೆಚ್ಚುವರಿ ಪೊಲೀಸ್ ಹುದ್ದೆ, ಮಹಿಳಾ ಹಾಗೂ ಸಂಚಾರಿ ಠಾಣೆಗಳನ್ನು ಪ್ರಾರಂಭಿಸಿದ್ದು, ಹೊಸ ವಾಹನಗಳ ಖರೀದಿಗೆ 100 ಕೋಟಿ ನೀಡಲಾಗುವುದು ಅಂತಾ ತಿಳಿಸಿದರು.

2,125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 540 ಕೋಟಿ ರೂಪಾಯಿ ನೀಡಲಾಗುವುದು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಆರೋಗ್ಯಕ್ಕಾಗಿ 100 ಕೋಟಿ ಒದಗಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮಕ್ಕಳಿಗಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಶುರು ಮಾಡಲಾಗಿದೆ ಎಂದರು. ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕರು, ಸರ್ಕಾರದ ಮುಖ್ಯಕಾರ್ಯದರ್ಶಿಗಳು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!