ಮಸ್ಕಿ ಉಪ ಚುನಾವಣೆ: ಪ್ರತಾಪಗೌಡ ನಾಮಪತ್ರ ಸಲ್ಲಿಕೆ

261

ಪ್ರಜಾಸ್ತ್ರ ಸುದ್ದಿ

ರಾಯಚೂರು: ಮಸ್ಕಿ ವಿಧಾನಸಭೆ ಉಪ ಚುನಾವಣೆಯ ಸಂಬಂಧ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಚಿವ ಬಿ.ಶ್ರೀರಾಮುಲು ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಕಳೆದ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ ಜಯ ಗಳಿಸಿದ್ದರು. ಮುಂದೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ರಚನೆ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆರ್.ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!