ಪಟಾಕಿ ಕಾರ್ಖಾನೆ ಸ್ಫೋಟ: 11 ಜನರ ಸಾವು

155

ಪ್ರಜಾಸ್ತ್ರ ಸುದ್ದಿ

ಹರ್ದಾ: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಗಾರ್ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದೆ. ಇದರಿಂದಾಗಿ 11 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಇಂದೋರ್, ಭೋಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗರ್ಧ ರೋಡ್ ಕಾರ್ಖಾನೆಯಲ್ಲಿ ಸ್ಫೋಟ ನಡೆದಿದೆ. ಇದರಿಂದಾಗಿ ಇಷ್ಟೊಂದು ಜೀವ ಹಾನಿ ಆಗಿದೆ. ಈ ಪ್ರದೇಶದಲ್ಲಿನ 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ. ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!