ಬೀದರನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

153

ಪ್ರಜಾಸ್ತ್ರ ಸುದ್ದಿ

ಬೀದರ: ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಘಟನೆ ನಗರದ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ಶ್ರೀರಾಮ್ ಅನ್ನೋ ಅಂತಿಮ ವರ್ಷದ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಓದು ಮುಗಿದು ಡಾಕ್ಟರ್ ಆಗುವ ಹೊತ್ತಿನಲ್ಲಿ ವಿದ್ಯಾರ್ಥಿ ಶ್ರೀರಾಮ್ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದಕ್ಕೆಲ್ಲ ಕಾರಣ ಏನಿರಬಹುದು ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಬ್ರೀಮ್ಸ್ ಮೆಡಿಕಲ್ ಕಾಲೇಜು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.




Leave a Reply

Your email address will not be published. Required fields are marked *

error: Content is protected !!